ಜಿಲ್ಲಾ ಸುದ್ದಿಉಪಯುಕ್ತ ಮಾಹಿತಿಗಳುಟ್ರೆಂಡಿಂಗ್ ಸುದ್ದಿಗಳುರಾಜ್ಯ ಸುದ್ದಿಸ್ಥಳೀಯ ಸುದ್ದಿಗಳು
ಪೊಲೀಸ್ ಇಲಾಖೆಯಲ್ಲಿ ವಿಶಿಷ್ಟ ಸೇವೆ: ಡಿಜಿ & ಐಜಿಪಿ ಪ್ರಶಂಸನಾ ಪದಕ ಪುರಸ್ಕೃತ ಪಿಐ ಅರುಣಕುಮಾರ್ಗೆ ನಗರ ಪೊಲೀಸ್ ಆಯುಕ್ತರಿಂದ ಸನ್ಮಾನ

ಕಲಬುರಗಿ: ಪೊಲೀಸ್ ಇಲಾಖೆಯಲ್ಲಿ ನಿಷ್ಠೆ, ಪ್ರಾಮಾಣಿಕತೆ ಹಾಗೂ ಅತ್ಯುತ್ತಮ ಸೇವೆ ಸಲ್ಲಿಸಿದ ಕಲಬುರಗಿ ನಗರ ಸಿಸಿಬಿ (CCB) ಘಟಕದ ಪೊಲೀಸ್ ಇನ್ಸ್ಪೆಕ್ಟರ್ ಅರುಣಕುಮಾರ್ ಅವರಿಗೆ ಪ್ರತಿಷ್ಠಿತ “ಡಿಜಿ & ಐಜಿಪಿ ಪ್ರಶಂಸನಾ ಪದಕ” (DG & IGP Commendation Disc Medal) ಲಭಿಸಿದ್ದು, ಅವರನ್ನು ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರು ಗೌರವಿಸಿ ಸನ್ಮಾನಿಸಿದರು.
ಇನ್ಸ್ಪೆಕ್ಟರ್ ಅರುಣಕುಮಾರ್ ಅವರ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಪೊಲೀಸ್ ಆಯುಕ್ತರು, ಮುಂದಿನ ದಿನಗಳಲ್ಲೂ ಇದೇ ರೀತಿಯ ಕರ್ತವ್ಯನಿಷ್ಠೆ ಹಾಗೂ ಜನಸ್ನೇಹಿ ಸೇವೆಯನ್ನು ಮುಂದುವರಿಸಿಕೊಂಡು ಹೋಗುವಂತೆ ಶುಭ ಹಾರೈಸಿದರು.
ಈ ಸಾಧನೆಯು ಪೊಲೀಸ್ ಇಲಾಖೆಯ ಗೌರವವನ್ನು ಹೆಚ್ಚಿಸಿದ್ದು, ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಇನ್ನಷ್ಟು ದಕ್ಷತೆಯಿಂದ ಕರ್ತವ್ಯ ನಿರ್ವಹಿಸಲು ಪ್ರೇರಣೆಯಾಗಿದೆ.
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.



