ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜಕೀಯರಾಜ್ಯ ಸುದ್ದಿ

ಚಿಕ್ಕಮಗಳೂರಿನ ನೂರಾರು ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ: ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ ಪಕ್ಷಾಂತರ

Share News

ಬೆಂಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ 500ಕ್ಕೂ ಹೆಚ್ಚು ಮುಖಂಡರು ಮತ್ತು ಕಾರ್ಯಕರ್ತರು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರ ನೇತೃತ್ವದಲ್ಲಿ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡರು.

​ನಗರದ ಜೆಡಿಎಸ್ ರಾಜ್ಯ ಕಚೇರಿ ‘ಜೆಪಿ ಭವನ’ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿ.ಜೆ. ಸುರೇಶ್, ಡಿ.ಬಿ. ಅಶೋಕ್ ಗೌಡ, ಬಿ.ಎಸ್. ಅಜಿತ್ ಗೌಡ, ಜಿ.ಯು. ಚಂದ್ರೇಗೌಡ, ಝುಕಾರಿಯಾ ಜಾಕೀರ್ ಸೇರಿದಂತೆ ಪ್ರಮುಖ ನಾಯಕರು ತಮ್ಮ ಬೆಂಬಲಿಗರೊಂದಿಗೆ ಪಕ್ಷದ ಧ್ವಜ ಹಿಡಿದರು.

​ಸುದ್ದಿಗೋಷ್ಠಿಯಲ್ಲಿ ನಿಖಿಲ್ ಕುಮಾರಸ್ವಾಮಿ ವ್ಯಕ್ತಪಡಿಸಿದ ಪ್ರಮುಖ ಅಭಿಪ್ರಾಯಗಳು:

​ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ: ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪ ಹೊಸದಲ್ಲ. 87 ಕೋಟಿ ರೂ. ದುರುಪಯೋಗವಾಗಿರುವುದನ್ನು ಹಿಂದೆಯೇ ಒಪ್ಪಿಕೊಳ್ಳಲಾಗಿದ್ದರೂ ಸಚಿವ ಸ್ಥಾನ ನೀಡಿರುವುದು ಸರಿಯಲ್ಲ. ನೈತಿಕ ಹೊಣೆ ಹೊತ್ತು ಸಚಿವ ನಾಗೇಂದ್ರ ತಕ್ಷಣ ರಾಜೀನಾಮೆ ನೀಡಬೇಕು.

​ರೈತರ ಜ್ವಲಂತ ಸಮಸ್ಯೆ ನಿರ್ಲಕ್ಷ್ಯ: ಕಲ್ಯಾಣ ಹಾಗೂ ಕಿತ್ತೂರು ಕರ್ನಾಟಕ ಭಾಗದಲ್ಲಿ 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲ.

​ವಿಧಾನಸಭೆ ಕಲಾಪದಲ್ಲಿ ಕಾಲಹರಣ: ನೈಸ್ ರಸ್ತೆ ಹಗರಣ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷ ಚರ್ಚಿಸದೆ ಕಲಾಪದಲ್ಲಿ ಸಮಯ ವ್ಯರ್ಥ ಮಾಡುತ್ತಿದೆ.

​ಉದ್ಯಾನವನ ವಾಣಿಜ್ಯ ಬಳಕೆಗೆ ವಿರೋಧ: ಬೆಂಗಳೂರಿನ ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿಕೊಳ್ಳಲು ಮುಂದಾಗಿರುವ ಸರ್ಕಾರದ ನಿರ್ಧಾರ ನಗರದ ಹಸಿರು ಮತ್ತು ಪರಿಸರವನ್ನು ನಾಶಪಡಿಸಲಿದೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!