ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ಹೆದ್ದಾರಿಗಳಲ್ಲಿ ಸುರಕ್ಷಿತ ಸಂಚಾರಕ್ಕೆ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

Share News

ಕಾರವಾರ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾರ್ವಜನಿಕರು ಹಾಗೂ ವಾಹನಗಳ ಅಪಘಾತ ರಹಿತ ಸುರಕ್ಷಿತ ಸಂಚಾರಕ್ಕಾಗಿ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದ್ದಾರೆ.

​ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

​ಸಭೆಯಲ್ಲಿ ನೀಡಲಾದ ಪ್ರಮುಖ ಸೂಚನೆಗಳು:

​ಕಾರವಾರ ಕಾಳಿ ಸೇತುವೆ ಹಾಗೂ ಫ್ಲೈ ಓವರ್: ಕಾಳಿ ಸೇತುವೆ ಮೇಲೆ ಗಾಳಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಸುರಕ್ಷತಾ ಕ್ರಮ ವಹಿಸಬೇಕು. ಫ್ಲೈ ಓವರ್ ಕೆಳಗಿನ ಅನಧಿಕೃತ ಪಾರ್ಕಿಂಗ್ ತಡೆದು ಫೆನ್ಸಿಂಗ್, ಗಾರ್ಡನಿಂಗ್ ಹಾಗೂ ವಾಕಿಂಗ್ ಪಾಥ್ ನಿರ್ಮಿಸಬೇಕು.

​ಕುಮಟಾ ಹಾಗೂ ಮುರುಡೇಶ್ವರ-ಅಂಕೋಲಾ: ಕುಮಟಾದಲ್ಲಿ ಡಿವೈಡರ್ ಮತ್ತು ಬೀದಿ ದೀಪ ಅಳವಡಿಸಬೇಕು. ಹೆದ್ದಾರಿ ಪಕ್ಕದಲ್ಲಿ ಟ್ರಕ್ ಟರ್ಮಿನಲ್ ಹಾಗೂ ಚಾಲಕರ ವಿಶ್ರಾಂತಿಗಾಗಿ ಮೂಲಭೂತ ಸೌಕರ್ಯ ಕಲ್ಪಿಸಬೇಕು.

​ಅಂಕೋಲಾ-ಯಲ್ಲಾಪುರ ರಸ್ತೆ: ರಸ್ತೆಗೆ ಅಡ್ಡಲಾಗಿರುವ ಮರದ ಕೊಂಬೆಗಳನ್ನು ತೆರವುಗೊಳಿಸಿ, ಸೂಚನಾ ಫಲಕಗಳು, ಬ್ಲಿಂಕಿಂಗ್ ಲೈಟ್‌ಗಳು, ಕ್ಯಾಟ್ ಐ ಹಾಗೂ ಅರೆಬೈಲ್ ಘಾಟ್‌ನಲ್ಲಿ ರೇಡಿಯಂ ಸ್ಟಿಕ್ಕರ್‌ಗಳನ್ನು ಅಳವಡಿಸಬೇಕು.

​ಅತಿಯಾದ ಸರಕು ಸಾಗಣೆ ನಿಯಂತ್ರಣ: ಆರ್‌ಟಿಒ ಅಧಿಕಾರಿಗಳು ನಿರಂತರ ತಪಾಸಣೆ ನಡೆಸಿ, ಮಿತಿಗಿಂತ ಹೆಚ್ಚು ಸರಕು ಸಾಗಿಸುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಹಾಗೂ ಚಾಲನಾ ಪರವಾನಗಿ ವಿತರಣೆಗೆ ವಿಶೇಷ ಕ್ಯಾಂಪ್ ಆಯೋಜಿಸಬೇಕು.

​ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಮಾತನಾಡಿ, ಹೆದ್ದಾರಿಯಲ್ಲಿ ಎಎನ್‌ಪಿಆರ್ (ANPR) ಕ್ಯಾಮೆರಾ, ಬ್ಲಾಕ್ ಸ್ಪಾಟ್‌ಗಳಲ್ಲಿ ಸುರಕ್ಷತಾ ಕ್ರಮಗಳು ಹಾಗೂ ಬೀಡಾಡಿ ದನಗಳ ನಿಯಂತ್ರಣಕ್ಕೆ ಕ್ರಮ ವಹಿಸಲು ತಿಳಿಸಿದರು.

​ಸಭೆಯಲ್ಲಿ ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ, ಜಿ.ಪಂ. ಉಪಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!