ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ಮಡಿಕೇರಿಯಲ್ಲಿ ವಿಜೃಂಭಣೆಯ ಕಾರ್ಗಿಲ್ ವಿಜಯೋತ್ಸವ: ವೀರ ಯೋಧರಿಗೆ ಗೌರವ ನಮನ

Share News

ಮಡಿಕೇರಿ: 1999ರ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನವನ್ನು ಬಗ್ಗುಬಡಿದು ವಿಜಯ ಪತಾಕೆ ಹಾರಿಸಿದ ಭಾರತೀಯ ಸೈನಿಕರ ಸಾಹಸಗಾಥೆಯನ್ನು ಸ್ಮರಿಸಲು ಹಾಗೂ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಮಡಿಕೇರಿಯಲ್ಲಿ ಜುಲೈ 26, ಭಾನುವಾರದಂದು ‘ಕಾರ್ಗಿಲ್ ವಿಜಯೋತ್ಸವ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಹಿಂದೂ ಜಾಗರಣ ವೇದಿಕೆ, ವಿಶ್ವ ಹಿಂದೂ ಪರಿಷತ್ ಹಾಗೂ ವಿವಿಧ ದೇಶಪ್ರೇಮಿ ಸಂಘ-ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಭಾನುವಾರ ಬೆಳಿಗ್ಗೆ 9:00 ಗಂಟೆಗೆ ಮಡಿಕೇರಿಯ ಯುದ್ಧ ಸ್ಮಾರಕದಲ್ಲಿ (War Memorial) ಈ ವಿಶೇಷ ಕಾರ್ಯಕ್ರಮ ನಡೆಯಲಿದೆ.

​ಇಂದಿನ ಯುವ ಪೀಳಿಗೆಗೆ ಭಾರತೀಯ ಸೈನಿಕರ ಶೌರ್ಯ, ತ್ಯಾಗ ಮತ್ತು ದೇಶಪ್ರೇಮವನ್ನು ನೆನಪಿಸುವ ನಿಟ್ಟಿನಲ್ಲಿ ಈ ವಿಜಯೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!