ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ಪಾವಗಡ: ಹಾಸ್ಟೆಲ್ ಶೌಚಾಲಯದಲ್ಲಿ ಕುಸಿದುಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು

Share News

ಪಾವಗಡ: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಂಗಸಮುದ್ರದ ಕಸ್ತೂರಿಬಾ ಗಾಂಧಿ ಬಾಲಕಿಯರ ಹಾಸ್ಟೆಲ್‌ನಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಶೌಚಾಲಯದಲ್ಲಿ ಕುಸಿದುಬಿದ್ದು ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ.

​ಮೃತ ವಿದ್ಯಾರ್ಥಿನಿಯನ್ನು ಕಾರಗಾನಹಟ್ಟಿ ಗ್ರಾಮದ ನರಸಿಂಹಮೂರ್ತಿ ಹಾಗೂ ಶಾರದಮ್ಮ ದಂಪತಿಯ ಪುತ್ರಿ, 14 ವರ್ಷದ ಪ್ರಿಯಾಂಕಾ ಎಂದು ಗುರುತಿಸಲಾಗಿದೆ. ಈಕೆ ರಂಗಸಮುದ್ರದ ತ್ರಿಯಂಬಕೇಶ್ವರ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

​ಘಟನೆಯ ವಿವರ:

ಅನಾರೋಗ್ಯದ ಕಾರಣ ಸ್ವಗ್ರಾಮಕ್ಕೆ ತೆರಳಿದ್ದ ಪ್ರಿಯಾಂಕಾ, ಚೇತರಿಸಿಕೊಂಡು ಆಗಸ್ಟ್ 7ರಂದು ಹಾಸ್ಟೆಲ್‌ಗೆ ವಾಪಸಾಗಿದ್ದಳು. ಶನಿವಾರ ಮುಂಜಾನೆ ಶೌಚಾಲಯಕ್ಕೆ ತೆರಳಿದ್ದ ವೇಳೆ ರಕ್ತದೊತ್ತಡ ಕಡಿಮೆಯಾಗಿ ದಿಢೀರನೆ ಕುಸಿದುಬಿದ್ದಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ. ಹೃದಯಾಘಾತ ಅಥವಾ ರಕ್ತದೊತ್ತಡ ಕುಸಿತ ಸಾವಿಗೆ ಕಾರಣವೇ ಎಂಬುದು ವೈದ್ಯಕೀಯ ವರದಿಯಿಂದ ತಿಳಿಯಬೇಕಿದೆ.

​ಪೋಷಕರ ಆಕ್ರೋಶ, ಅಧಿಕಾರಿಗಳ ಭೇಟಿ:

ಘಟನೆಯಿಂದ ಆಕ್ರೋಶಗೊಂಡ ಪೋಷಕರು ಹಾಸ್ಟೆಲ್‌ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಎಂದು ಆರೋಪಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪಾವಗಡ ತಹಶೀಲ್ದಾರ್ ವೈ. ರವಿ ಹಾಗೂ ಪೊಲೀಸರು ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!