ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್
ಜೇಬಿನಲ್ಲಿದ್ದ ‘ಪವರ್ ಬ್ಯಾಂಕ್’ ಸ್ಫೋಟ: ಯುವಕನಿಗೆ ಗಂಭೀರ ಗಾಯ!

ಬಾಗಲಕೋಟೆ: ಜೇಬಿನಲ್ಲಿದ್ದ ಪವರ್ ಬ್ಯಾಂಕ್ ದಿಢೀರನೆ ಸ್ಫೋಟಗೊಂಡ ಪರಿಣಾಮ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ.
ಜಮಖಂಡಿಯ ಬಸ್ ನಿಲ್ದಾಣದ ಬಳಿಯಿರುವ ಎಟಿಎಂ ಸಮೀಪ ಈ ದುರ್ಘಟನೆ ಸಂಭವಿಸಿದ್ದು, ಗಾಯಗೊಂಡ ಯುವಕನನ್ನು ಸಿದ್ದು ಸಾಳಂಕಿ ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ಸಿದ್ದು ತಮ್ಮ ಪ್ಯಾಂಟ್ ಜೇಬಿನಲ್ಲಿ ಪವರ್ ಬ್ಯಾಂಕ್ ಇಟ್ಟುಕೊಂಡು ನಡೆದು ತೆರಳುತ್ತಿದ್ದ ವೇಳೆ ಈ ಏಕಾಏಕಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಸಿದ್ದು ಅವರ ಕಾಲಿನ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಈ ದುರಂತ ಘಟನೆಯು ಜಮಖಂಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಮೊಬೈಲ್ ಹಾಗೂ ಪವರ್ ಬ್ಯಾಂಕ್ ಬಳಸುವ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.



