ಜಿಲ್ಲಾ ಸುದ್ದಿಕ್ರೈಂ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ಬೆಂಗಳೂರಿಗೆ ತೆರಳುವುದಾಗಿ ಹೇಳಿ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ: ಷೇರು ಮಾರುಕಟ್ಟೆಯಲ್ಲಿ ನಷ್ಟ ಶಂಕೆ!

Share News

ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಉಂಟಾದ ಭಾರಿ ನಷ್ಟ ಹಾಗೂ ಸಾಲದ ಬಾಧೆಯಿಂದಾಗಿ ಒಂದೇ ಕುಟುಂಬದ ನಾಲ್ವರು ಡೆತ್ ನೋಟ್/ಡೆಸಿಷನ್ ನೋಟ್ ಬರೆದಿಟ್ಟು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ದಾವಣಗೆರೆಯ ಬನಶಂಕರಿ ಬಡಾವಣೆಯಲ್ಲಿ ನಡೆದಿದೆ.

​ದಾವಣಗೆರೆ ತಾಲೂಕಿನ ಶಾಗಲೆ ಗ್ರಾಮದ ರಮೇಶ್ ಕುಮಾರ್ (38), ಅವರ ಪತ್ನಿ ಜಯಶೀಲ (36), ಪುತ್ರ ಹಿತೇಶ್ (9) ಹಾಗೂ ಪುತ್ರಿ ಪ್ರೇರಣ (3) ನಾಪತ್ತೆಯಾದ ದುರದೃಷ್ಟಕರ ಕುಟುಂಬದ ಸದಸ್ಯರು.

​ಆಗಸ್ಟ್ 14 ರಿಂದ ಸಂಪರ್ಕಕ್ಕೆ ಸಿಗದ ಕುಟುಂಬ:

ರಮೇಶ್ ಕುಮಾರ್ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ವ್ಯವಹಾರ ನಡೆಸುತ್ತಿದ್ದರು. ಇತ್ತೀಚೆಗೆ ಮಾರುಕಟ್ಟೆಯಲ್ಲಿ ಭಾರಿ ನಷ್ಟ ಉಂಟಾಗಿತ್ತು ಎನ್ನಲಾಗಿದೆ.

​ಆಗಸ್ಟ್ 14ರಂದು ತಮ್ಮ ಪೋಷಕರಿಗೆ ಕರೆ ಮಾಡಿದ್ದ ರಮೇಶ್, ‘ಬೆಂಗಳೂರಿಗೆ ಹೋಗಿ ಬರುವುದಾಗಿ’ ತಿಳಿಸಿದ್ದರು. ತಮ್ಮ ಸ್ವಂತ ಕಾರು ಹಾಗೂ ಬೈಕ್ ಅನ್ನು ಮನೆಯ ಬಳಿಯೇ ಬಿಟ್ಟು, ಆಟೋದಲ್ಲಿ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣಕ್ಕೆ ತಲುಪಿದ್ದರು. ಅಲ್ಲಿಂದ ರಮೇಶ್ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಅಂದಿನಿಂದ ಕುಟುಂಬದ ಯಾವ ಸದಸ್ಯರೂ ಸಂಬಂಧಿಕರ ಸಂಪರ್ಕಕ್ಕೆ ಸಿಕ್ಕಿಲ್ಲ.

​‘ನಮ್ಮನ್ನು ಹುಡುಕಬೇಡಿ’ – ಸಿಕ್ಕಿತು ನಿಗೂಢ ಪತ್ರ!

ತನಿಖೆಯ ವೇಳೆ ರಮೇಶ್ ಕುಮಾರ್ ಬರೆದಿಟ್ಟಿರುವ ಪತ್ರವೊಂದು ಪೊಲೀಸರಿಗೆ ಲಭ್ಯವಾಗಿದೆ. ಪತ್ರದಲ್ಲಿ:

​”ನಾವು ಬಹಳ ಸಾಲ ಮಾಡಿಕೊಂಡಿದ್ದೇವೆ, ಆದರೆ ಯಾರಿಗೂ ಅನ್ಯಾಯ ಮಾಡಿಲ್ಲ.”

​”ಸಾಲ ತೀರಿಸಲು ಸಾಧ್ಯವಾಗದ ಕಾರಣ ದೂರ ಹೋಗುತ್ತಿದ್ದೇವೆ.”

​”ನಮ್ಮಿಂದ ಸಂಬಂಧಿಕರ ಹೆಸರು ಹಾಳಾಗಬಾರದು, ಹೀಗಾಗಿ ದೂರ ಹೋಗುತ್ತಿದ್ದೇವೆ, ನಮ್ಮನ್ನು ಯಾರೂ ಹುಡುಕಬೇಡಿ.”

​ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

​ಸಂಬಂಧಿಕರು ಹಾಗೂ ಪರಿಚಿತರ ಮನೆಗಳಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ, ರಮೇಶ್ ಅವರ ಕುಟುಂಬಸ್ಥರು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಲ್ವರ ಪತ್ತೆಗಾಗಿ ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!