ಉಪಯುಕ್ತ ಮಾಹಿತಿಗಳುಕ್ರೈಂ ಸುದ್ದಿಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್
ಜಿಮ್ಗಳಲ್ಲಿ ಮಹಿಳೆಯರ ಸುರಕ್ಷತೆಗೆ ಆದ್ಯತೆ – ಸಿಸಿಟಿವಿ ಅಳವಡಿಕೆಗೆ ಪೊಲೀಸರ ನೋಟಿಸ್

ಶಿವಮೊಗ್ಗ: ನಗರದಲ್ಲಿ ಮಹಿಳೆಯರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಅಪರಾಧ ತಡೆಗಟ್ಟುವ ಉದ್ದೇಶದಿಂದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಜಿಮ್ಗಳಿಗೆ ಪೊಲೀಸರು ಭೇಟಿ ನೀಡಿ ದಿಢೀರ್ ಪರಿಶೀಲನೆ ನಡೆಸಿದರು.
ಪರಿಶೀಲನೆ ವೇಳೆ ಜಿಮ್ಗಳಿಗೆ ಆಗಮಿಸುವ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವುದು ಮಾಲೀಕರ ಜವಾಬ್ದಾರಿಯಾಗಿದೆ ಎಂದು ತಿಳಿಸಿದ ಪೊಲೀಸರು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕರ್ನಾಟಕ ಪಬ್ಲಿಕ್ ಸೇಫ್ಟಿ ಆಕ್ಟ್ನ ನಿಯಮಗಳ ಪ್ರಕಾರ ಪ್ರತಿಯೊಂದು ಜಿಮ್ನಲ್ಲೂ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಸೂಚಿಸಿ, ಸಂಬಂಧಪಟ್ಟ ಜಿಮ್ ಮಾಲೀಕರಿಗೆ ಸ್ಥಳದಲ್ಲೇ ನೋಟಿಸ್ ಜಾರಿಗೊಳಿಸಲಾಯಿತು.
ಸಾರ್ವಜನಿಕರ ರಕ್ಷಣೆ ಹಾಗೂ ಮಹಿಳೆಯರ ಮೇಲಿನ ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಇಂತಹ ಪರಿಶೀಲನೆ ಮತ್ತು ಜಾಗೃತಿ ಕಾರ್ಯಕ್ರಮಗಳು ಮುಂದೆಯೂ ತೀವ್ರವಾಗಿ ಮುಂದುವರಿಯಲಿವೆ ಎಂದು ವಿನೋಬನಗರ ಪೊಲೀಸ್ ಇಲಾಖೆ ತಿಳಿಸಿದೆ.



