ರಾಜ್ಯ ಕರಾಟೆ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಬಳ್ಳಾರಿ,ಮಾ.30: ರಾಜ್ಯ ಕರಾಟೆ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಹೊಸ ಕಾರ್ಯಕಾರಿ ಸಮಿತಿ ರಚನೆಗೊಂಡಿದೆ.
ಇತ್ತೀಚೆಗೆ ಉಡುಪಿಯ ದುರ್ಗಾ ಇಂಟರನ್ಯಾಷನಲ್ ಹೋಟೇಲ್ ನಲ್ಲಿ ನಡೆದ ಮಹಾಸಭೆಯಲ್ಲಿ ಸಂಘದ ನಿಯಮಾವಳಿಗಳ ಪ್ರಕಾರ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಕರಾಟೆ ಶಿಕ್ಷಕರು ಹಾಗೂ ಪ್ರತಿನಿಧಿಗಳು ಭಾಗವಹಿಸಿದ್ದರು.
ಚುನಾವಣೆ ಪ್ರಕ್ರಿಯೆ ಪಾರದರ್ಶಕ ಮತ್ತು ನ್ಯಾಯಸಮ್ಮತ ರೀತಿಯಲ್ಲಿ ನಡೆಯಿತು. ಈ ವೇಳೆ ಮಂಗಳೂರಿನ ಮಹಮ್ಮದ್ ನದೀಮ್ ಅವರನ್ನು ಅಧ್ಯಕ್ಷರಾಗಿ ಹಾಗೂ ಬಳ್ಳಾರಿ ಜಿಲ್ಲೆಯ ಕಟ್ಟೇಸ್ವಾಮಿ,ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ ಬೆಂಗಳೂರಿನ ಸುಂದರಮ್, ಉಡುಪಿಯ ಸತೀಶ್ ಬೆಳ್ಮಣ್ಣು, ಕಾರವಾರದ ವಿಶಾಲ್ ಕೋಶಾಧಿಕಾರಿಯಾ ವಿಜಯಪುರದ ಶಿವಕುಮಾರ್ ಶಾರದಳ್ಳಿ, ರಾಜ್ಯ ವಕ್ತಾರರಾಗಿ ಕೊಪ್ಪಳದ ಮೌನೇಶ್ ವಡ್ಡಟ್ಟಿ,ಕಾರ್ಯಾಕಾರಣಿ ಸಭೆಯ ಸದಸ್ಯರಾಗಿ ವಿಜಯದ ಸುಭಾಷ್ ಮುತ್ಕೂರ್ ಹಾಗೂ ದಾವಣಗೆರೆಯ ಭಾಷ್ ಇವರುಗಳನ್ನು ಆಯ್ಕೆ ಮಾಡಲಾಯಿತು. ಇತರ ಪದಾಧಿಕಾರಿಗಳನ್ನೂ ಈ ಸಂದರ್ಭದಲ್ಲಿ ಆಯ್ಕೆ ಮಾಡಲಾಗಿದೆ.
ಹೊಸದಾಗಿ ಆಯ್ಕೆಯಾದ ಪದಾಧಿಕಾರಿಗಳು ರಾಜ್ಯದ ಕರಾಟೆ ಕ್ಷೇತ್ರದ ಅಭಿವೃದ್ಧಿಗೆ ಬದ್ಧರಾಗಿದ್ದು, ತರಬೇತಿ ಗುಣಮಟ್ಟ ಹೆಚ್ಚಿಸುವುದು, ವಿದ್ಯಾರ್ಥಿಗಳ ಪ್ರೋತ್ಸಾಹ, ಹಾಗೂ ರಾಜ್ಯ ಮಟ್ಟದ ಕ್ರೀಡಾಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುವ ದಿಸೆಯಲ್ಲಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.
ಸಂಘದ ಹಿರಿಯರು ಮತ್ತು ಸದಸ್ಯರು ಹೊಸ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ತಿಳಿಸಿ, ಅವರ ಮುಂದಿನ ಕಾರ್ಯಚಟುವಟಿಕೆಗಳಿಗೆ ಶುಭಹಾರೈಸಿದರು.



