ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿ

ತೀರ್ಥಹಳ್ಳಿ: ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ – ಚಾಲಕ ಪ್ರಾಣಾಪಾಯದಿಂದ ಪಾರು

Share News

ತೀರ್ಥಹಳ್ಳಿ: ತಾಲೂಕಿನ ನಾಲೂರು ಕೊಳಿಗೆ ಬಳಿ ಇಂದು ಮಧ್ಯಾಹ್ನ ಚಲಿಸುತ್ತಿದ್ದ ಡಸ್ಟರ್ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ವಾಹನ ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಸಂಭವಿಸಿದೆ. ಚಾಲಕ ಸಮಯಪ್ರಜ್ಞೆಯಿಂದ ಕಾರಿನಿಂದ ಹೊರಬಂದಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ.

ಉಡುಪಿಯಿಂದ ಸೊರಬಕ್ಕೆ ತೆರಳುತ್ತಿದ್ದ ಈ ಡಸ್ಟರ್ ಕಾರು ಆಗುಂಬೆ ಮತ್ತು ಮೇಘರವಳ್ಳಿ ಮಾರ್ಗವಾಗಿ ನಾಲೂರು ಕೊಳಿಗೆ ಬಳಿ ಬರುತ್ತಿದ್ದಂತೆ, ಇಂಜಿನ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಗಾಬರಿಗೊಂಡ ಚಾಲಕ ವಾಹನವನ್ನು ಎಡಕ್ಕೆ ತಿರುಗಿಸಿದ ಪರಿಣಾಮ, ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ದರೆಬೈಲಿಗೆ (ಗುಡ್ಡದ ಭಾಗ) ಡಿಕ್ಕಿ ಹೊಡೆದಿದೆ.

​ಡಿಕ್ಕಿಯ ರಭಸಕ್ಕೆ ಬೆಂಕಿ ಮತ್ತಷ್ಟು ವ್ಯಾಪಿಸಿದ್ದು, ನೋಡನೋಡುತ್ತಿದ್ದಂತೆಯೇ ಕಾರು ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಚಾಲಕ ಸೊರಬ ಮೂಲದ ಸುಹೇಲ್ ಎಂದು ಗುರುತಿಸಲಾಗಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಅವರು ಕಾರಿನಿಂದ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿಗೆ ಹತ್ತಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆಯು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!