ಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ಮಕ್ಕಳ ಹಕ್ಕುಗಳ ರಕ್ಷಣೆ ಪ್ರಜ್ಞಾವಂತ ನಾಗರಿಕರ ಕರ್ತವ್ಯ: ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರಾದ ಜಿ. ಪ್ರಭಾವತಿ

Share News

ಚಾಮರಾಜನಗರ: ಈ ದೇಶದ ಭವಿಷ್ಯದ ಪ್ರಜೆಗಳಾದ ಮಕ್ಕಳು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ತಿಳಿಸಿದರು.

​ನಗರದ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ವಿವಿಧ ಇಲಾಖೆಗಳು ಹಾಗೂ ಭಾರತೀಯ ಮಕ್ಕಳ ಪ್ರತಿಷ್ಠಾನದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ‘ಮಕ್ಕಳ ಸುರಕ್ಷತೆ, ಕಾನೂನು ನೆರವು ಮತ್ತು ಶಿಫಾರಸ್ಸು ಕಾರ್ಯವಿಧಾನಗಳ ಬಲವರ್ಧನೆಗಾಗಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಸಮನ್ವಯ ಕಾರ್ಯಾಗಾರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

​ಬಾಲ್ಯವಿವಾಹ, ದೌರ್ಜನ್ಯ, ಶೋಷಣೆ ಹಾಗೂ ಮಾನವ ಕಳ್ಳಸಾಗಣೆಯಿಂದ ಮಕ್ಕಳನ್ನು ಮುಕ್ತಗೊಳಿಸಿ ಸುರಕ್ಷಿತ ವಾತಾವರಣ ಒದಗಿಸುವುದು ಈ ಕಾರ್ಯಾಗಾರದ ಮುಖ್ಯ ಉದ್ದೇಶವಾಗಿದೆ. ಮಕ್ಕಳಿಗೆ ಉಚಿತ ಕಾನೂನು ನೆರವು ಹಾಗೂ ವೈದ್ಯಕೀಯ ಸಹಾಯ ನೀಡುವುದು ಸರ್ಕಾರದ ಎಲ್ಲಾ ಇಲಾಖೆಗಳ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.

​ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ ಮಾತನಾಡಿ, “ಸಂಶಯಾಸ್ಪದವಾಗಿ ಕಂಡುಬರುವ ಮಕ್ಕಳ ರಕ್ಷಣೆಗೆ ‘ಮಕ್ಕಳ ಸಹಾಯವಾಣಿ 1098’ಕ್ಕೆ ಕರೆ ಮಾಡಬೇಕು. ಬಾಲ್ಯವಿವಾಹ, ಫೋಕ್ಸೋ ಹಾಗೂ ಬಾಲಕಾರ್ಮಿಕ ಪದ್ಧತಿ ತಡೆಗೆ ಗ್ರಾಮಸಭೆಗಳು ಹಾಗೂ ಸಂತೆ-ಜಾತ್ರೆಗಳಲ್ಲಿ ಜಾಗೃತಿ ಮೂಡಿಸಬೇಕಿದೆ” ಎಂದರು.

​ಇದೇ ವೇಳೆ ಮಾನವ ಕಳ್ಳಸಾಗಣೆ, ಬಾಲ್ಯವಿವಾಹ ಮುಕ್ತ ಹಾಗೂ ಗೃಹಹಿಂಸೆ ತಡೆ ಕುರಿತ ಜಾಗೃತಿ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಶ್ರೀಧರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಮಸಮುದ್ರ ಪುಟ್ಟಸ್ವಾಮಿ, ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಮತ್ತಿತರರು ಉಪಸ್ಥಿತರಿದ್ದರು.

​ಚಾಮರಾಜನಗರ: 1.97 ಲಕ್ಷ ಗಣತಿ ನಮೂನೆ ಡಿಜಿಟಲೀಕರಣ

ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಪ್ರಗತಿಯಲ್ಲಿದೆ. ಕ್ಷೇತ್ರದಲ್ಲಿ ಒಟ್ಟು 239 ಮತಗಟ್ಟೆಗಳಿದ್ದು, 2,17,852 ಮತದಾರರಿದ್ದಾರೆ. ಇದುವರೆಗೆ 1,97,287 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡುವ ಅವಧಿಯು ಆಗಸ್ಟ್ 8 ರವರೆಗೆ ನಡೆಯಲಿದೆ ಎಂದು ಮತದಾರರ ನೋಂದಣಾಧಿಕಾರಿಗಳು ತಿಳಿಸಿದ್ದಾರೆ.

​ಕುಡಿಯುವ ನೀರು, ಜಾನುವಾರುಗಳ ಮೇವು ಸಮಸ್ಯೆಗೆ ತುರ್ತು ಕ್ರಮ ಕೈಗೊಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಸೂಚನೆ

​ಚಾಮರಾಜನಗರ:

ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವು ಸಮಸ್ಯೆಯನ್ನು ಪರಿಹರಿಸಲು ಅಧಿಕಾರಿಗಳು ತುರ್ತಾಗಿ ಕ್ರಮ ಕೈಗೊಳ್ಳಬೇಕು ಎಂದು ಬರ ಪರಿಸ್ಥಿತಿ ಮತ್ತು ಅತಿವೃಷ್ಠಿ ನಿರ್ವಹಣೆ ಕುರಿತ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಸೂಚನೆ ನೀಡಿದರು.

​ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಭಾವ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ಲೋಪವಾಗದಂತೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

​ಶಾಸಕ ಹೆಚ್.ಎಂ. ಗಣೇಶ್ ಪ್ರಸಾದ್ ಹಾಗೂ ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ ಮಾತನಾಡಿ, ಮುಂಜಾಗ್ರತಾ ಕ್ರಮಗಳನ್ನು ವಹಿಸುವ ಮೂಲಕ ನೀರಿನ ಅಭಾವ ಎದುರಾಗದಂತೆ ನೋಡಿಕೊಳ್ಳಬೇಕು ಎಂದರು.

​ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು ಹಾಗೂ ಹನೂರು ತಾಲೂಕುಗಳ ವ್ಯಾಪ್ತಿಯಲ್ಲಿ ಮುಂಬರುವ ದಿನಗಳಲ್ಲಿ ನೀರಿನ ಅಭಾವ ಎದುರಾಗಬಹುದಾದ ಗ್ರಾಮಗಳನ್ನು ಗುರುತಿಸಲಾಗಿದ್ದು, ಖಾಸಗಿ ಕೊಳವೆಬಾವಿ ಹಾಗೂ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿವರಣೆ ನೀಡಿದರು.

​ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!