ಉಡುಪಿ: ಎ.ಎಸ್.ಐ ಚಂದ್ರಶೆಟ್ಟಿ ಅವರಿಗೆ 2025ನೇ ಸಾಲಿನ ‘ಮುಖ್ಯಮಂತ್ರಿ ಪದಕ’ ಗೌರವ

ಉಡುಪಿ: ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಸುದೀರ್ಘ ಹಾಗೂ ಶ್ಲಾಘನೀಯ ಸೇವೆಯನ್ನು ಗುರುತಿಸಿ, ಉಡುಪಿ ನಗರ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ (ಎ.ಎಸ್.ಐ) ಚಂದ್ರಶೆಟ್ಟಿ ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ‘ಮುಖ್ಯಮಂತ್ರಿಗಳ ಪದಕ’ ಘೋಷಣೆಯಾಗಿದೆ.
ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಚಂದ್ರಶೆಟ್ಟಿ ಅವರು, ಅಪರಾಧ ಪತ್ತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಇವರ ಕರ್ತವ್ಯ ನಿಷ್ಠೆ ಮತ್ತು ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಈ ಗೌರವವನ್ನು ನೀಡಿದೆ.
ಚಂದ್ರಶೆಟ್ಟಿ ಅವರ ಈ ಸಾಧನೆಗೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಪರವಾಗಿ ಹಿರಿಯ ಅಧಿಕಾರಿಗಳು ಹಾಗೂ ಸಹೋದ್ಯೋಗಿಗಳು ಹೃತೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. “ಇವರ ಸೇವೆ ಇಲಾಖೆಯ ಇತರ ಸಿಬ್ಬಂದಿಗಳಿಗೆ ಮಾದರಿಯಾಗಿದೆ” ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
”ಪೊಲೀಸ್ ಇಲಾಖೆಯ ಶ್ಲಾಘನೀಯ ಸೇವೆಗಾಗಿ ಪದಕಕ್ಕೆ ಭಾಜನರಾದ ಚಂದ್ರಶೆಟ್ಟಿ ಅವರಿಗೆ ಅಭಿನಂದನೆಗಳು. ನಿಮ್ಮ ಈ ಗೌರವ ಜಿಲ್ಲಾ ಪೊಲೀಸ್ ದಳಕ್ಕೆ ಹೆಮ್ಮೆಯ ವಿಷಯವಾಗಿದೆ.”
— ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ
ಈ ಪ್ರಶಸ್ತಿಯು ಪದಕ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.



