ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್

ಸಂದನಪಾಳ್ಯದಲ್ಲಿ ಕುಡಿಯುವ ನೀರಿಗೆ ಭಾರಿ ಅಭಾವ: ಖಾಲಿ ಬಿಂದಿಗೆ ಹಿಡಿದು ಶಾಲೆ ವಿದ್ಯಾರ್ಥಿಗಳಿಂದ ಬೀದಿಗಿಳಿದು ಭಾರಿ ಪ್ರತಿಭಟನೆ!

Share News

ಹನೂರು: ತಾಲೂಕಿನ ಮಾರ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ತೀವ್ರಗೊಂಡಿದ್ದು, ಹನಿ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ, ಶಾಲಾ ವಿದ್ಯಾರ್ಥಿಗಳು ಖಾಲಿ ಬಿಂದಿಗೆಗಳನ್ನು ಹಿಡಿದು ರಸ್ತೆಗಿಳಿದು ಭಾರಿ ಪ್ರತಿಭಟನೆ ನಡೆಸಿದ ಘಟನೆ ಜರುಗಿದೆ.

​ಸಾಮಾನ್ಯವಾಗಿ ಗ್ರಾಮಸ್ಥರು ಹಾಗೂ ಹಿರಿಯ ನಾಗರಿಕರು ನೀರಿನ ಸಮಸ್ಯೆಗಾಗಿ ಹೋರಾಟ ಮಾಡುವುದನ್ನು ಕಾಣಬಹುದು. ಆದರೆ, ಸಂದನಪಾಳ್ಯದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದಾಗಿ ಸ್ವತಃ ಶಾಲಾ ಮಕ್ಕಳೇ ಬೀದಿಗಿಳಿದು ‘ನೀರು ಕೊಡಿ, ಜೀವ ಉಳಿಸಿ’ ಎಂದು ಬ್ಯಾನರ್ ಹಾಗೂ ಖಾಲಿ ಕೊಡಗಳನ್ನು ಪ್ರದರ್ಶಿಸುತ್ತಾ ಆಕ್ರೋಶ ಹೊರಹಾಕಿದರು.

​ಮುಖ್ಯಾಂಶಗಳು:

​ವಿದ್ಯಾರ್ಥಿಗಳ ಬೀದಿಗಿಳಿದ ಹೋರಾಟ: ಕುಡಿಯುವ ನೀರಿನ ಸಮಸ್ಯೆಯಿಂದ ಶಾಲಾ ವಿದ್ಯಾರ್ಥಿಗಳ ಓದಿಗೆ ಮತ್ತು ದಿನನಿತ್ಯದ ಜೀವನಕ್ಕೆ ತೊಂದರೆಯಾಗುತ್ತಿದ್ದು, ತಕ್ಷಣವೇ ಸೂಕ್ತ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿದರು.

​ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆ: ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗ್ರಾಮದ ಕುಡಿಯುವ ನೀರಿನ ಸಮಸ್ಯೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಲಾಯಿತು.

​ತುರ್ತು ಕ್ರಮಕ್ಕೆ ಒತ್ತಾಯ: ತಾಲೂಕಿನ ಹಲವು ಭಾಗಗಳಲ್ಲಿ ಜಲಕ್ಷಾಮ ತಲೆಯೇರಿರುವುದರಿಂದ, ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಬಲವಾಗಿ ಒತ್ತಾಯಿಸಿದ್ದಾರೆ.

​ವರದಿ: ಶಾರೂಕ್ ಖಾನ್, ಪತ್ರಕರ್ತರು, ಹನೂರು


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!