ರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಸ್ಥಳೀಯ ಸುದ್ದಿಗಳು

ಸಿದ್ದಗಂಗಾ ಶ್ರೀಗಳ 119ನೇ ಜನ್ಮದಿನೋತ್ಸವ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವಿ. ಸೋಮಣ್ಣ ಆಹ್ವಾನ

Share News

ನವದೆಹಲಿ: ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಮಹಾಸ್ವಾಮೀಜಿಗಳವರ 119ನೇ ಜನ್ಮದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮಕ್ಕೆ ನವದೆಹಲಿಯಲ್ಲಿಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಅಧಿಕೃತ ಆಹ್ವಾನ ನೀಡಲಾಯಿತು.

ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಯವರನ್ನು ಭೇಟಿ ಮಾಡಿ, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸಲ್ಲಿಸಿ ಗೌರವಪೂರ್ವಕವಾಗಿ ಆಹ್ವಾನಿಸಿದರು.

ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮೀಜಿಗಳವರ 119ನೇ ಜನ್ಮದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮವು ಏಪ್ರಿಲ್ 1, 2026 ರಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಅದ್ಧೂರಿಯಾಗಿ ಜರುಗಲಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ರಾಷ್ಟ್ರದ ಪ್ರಥಮ ಪ್ರಜೆ ಆಗಮಿಸಬೇಕು ಎಂದು ಸೋಮಣ್ಣ ಅವರು ವಿನಂತಿಸಿದರು.

ಸಿದ್ದಗಂಗಾ ಮಠವು ದಶಕಗಳಿಂದ ಅನ್ನದಾಸೋಹ, ಜ್ಞಾನದಾಸೋಹದ ಮೂಲಕ ಸಮಾಜಕ್ಕೆ ನೀಡುತ್ತಿರುವ ಕೊಡುಗೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಲಿದ್ದು, ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.

ಸಚಿವರ ಆಹ್ವಾನಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಸಿದ್ದಗಂಗಾ ಶ್ರೀಗಳ ಸಾಮಾಜಿಕ ಕಳಕಳಿ ಮತ್ತು ಮಠದ ಸೇವೆಯನ್ನು ಶ್ಲಾಘಿಸಿದರು.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!