ಉಪಯುಕ್ತ ಮಾಹಿತಿಗಳುಕ್ರೈಂ ಸುದ್ದಿಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ಕುಟ್ಟದಲ್ಲಿ ಮಾದಕ ವಸ್ತುಗಳ ವಿರುದ್ಧ ‘ಡ್ರಗ್ಸ್ ಬೇಡ BRO’ ಅಭಿಯಾನ: ಪೊಲೀಸರಿಂದ ಜಾಗೃತಿ

Share News

​ಕುಟ್ಟ (ಕೊಡಗು): ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತುಗಳ ಬಳಕೆಯ ವಿರುದ್ಧ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ “ಡ್ರಗ್ಸ್ ಬೇಡ BRO” ಅಭಿಯಾನದಡಿ ಜಾಗೃತಿ ಕಾರ್ಯಕ್ರಮ ನಡೆಸಿದರು.

​ಠಾಣಾ ಸರಹದ್ದಿನ ಕುಟ್ಟ ಬಸ್ ನಿಲ್ದಾಣ, ಆಟೋ ಚಾಲಕರ ನಿಲ್ದಾಣ, ಪೂಜೆಕಲ್ಲು ಹಾಗೂ ಸಿಂಕೋನ ಕಾಲೋನಿ ಭಾಗಗಳಲ್ಲಿ ಪೊಲೀಸ್ ಸಿಬ್ಬಂದಿ ತೆರಳಿ ಸಾರ್ವಜನಿಕರು, ಯುವಕರು ಹಾಗೂ ವಾಹನ ಚಾಲಕರಿಗೆ ಮಾದಕ ದ್ರವ್ಯಗಳ ಸೇವನೆಯಿಂದ ಆಗುವ ಅಪಾಯಗಳು ಮತ್ತು ಕಾನೂನು ಪರಿಣಾಮಗಳ ಕುರಿತು ಅರಿವು ಮೂಡಿಸಿದರು.

​ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗದೆ, ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಈ ಸಂದರ್ಭದಲ್ಲಿ ಪೊಲೀಸರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಕುಟ್ಟ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಭಾಗವಹಿಸಿದ್ದರು.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!