ಟ್ರೆಂಡಿಂಗ್ ಸುದ್ದಿಗಳುಕ್ರೈಂ ಸುದ್ದಿಜಿಲ್ಲಾ ಸುದ್ದಿತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್

ಮನೆ ಮಾಲೀಕರ ಮುಂದೆಯೇ ಕಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳ ಬಂಧನ: ₹12 ಲಕ್ಷ ಮೌಲ್ಯದ ಚಿನ್ನಾಭರಣ, 7 ಬೈಕ್ ಜಪ್ತಿ

Share News

ದೇವನಹಳ್ಳಿ: ಮನೆ ಮಾಲೀಕರ ಕಣ್ಣೆದುರೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳನನ್ನು ದೇವನಹಳ್ಳಿ ತಾಲೂಕಿನ ವಿಜಯಪುರ ಠಾಣೆ ಪೊಲೀಸರು ಕೇವಲ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

​ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಮೂಲದ ವಿಜಯಕುಮಾರ್ (24) ಬಂಧಿತ ಆರೋಪಿ. ಈತ ಎರಡು ಪ್ರತ್ಯೇಕ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಗೆ ಚೋರಕೈ ತೋರಿಸಿ ತಲೆಮರೆಸಿಕೊಂಡಿದ್ದನು.

​₹12 ಲಕ್ಷ ಮೌಲ್ಯದ ಮುಟ್ಟುಗೋಲು:

ಬಂಧಿತ ಆರೋಪಿಯಿಂದ ಸುಮಾರು ₹12 ಲಕ್ಷ ಮೌಲ್ಯದ 65 ಗ್ರಾಂ ಚಿನ್ನದ ಚೈನ್, 3 ಜೊತೆ ಕಿವಿ ಓಲೆ, ಉಂಗುರ ಸೇರಿದಂತೆ ಒಟ್ಟು ಚಿನ್ನಾಭರಣ ಹಾಗೂ ಕ ಕೃತ್ಯಕ್ಕೆ ಬಳಸಿದ್ದ ಮತ್ತು ಕಳವು ಮಾಡಿದ್ದ 7 ದ್ವಿಚಕ್ರ ವಾಹನಗಳನ್ನು (ಬೈಕ್) ಪೊಲೀಸರು ಜಪ್ತಿ ಮಾಡಿದ್ದಾರೆ.

​ಕಾರ್ಯಾಚರಣೆಯ ವಿವರ:

ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಮಾಲೀಕರ ಎದುರಲ್ಲೇ ಧೈರ್ಯವಾಗಿ ಕಳ್ಳತನ ನಡೆಸಿ ಎಸ್ಕೇಪ್ ಆಗಿದ್ದ ಆರೋಪಿಯ ಸುಳಿವು ಬೆನ್ನತ್ತಿದ ಪೊಲೀಸರು, ಕೃತ್ಯ ನಡೆದ 24 ಗಂಟೆಯೊಳಗೆ ಆತನನ್ನು ಲಾಕ್ ಮಾಡಿದ್ದಾರೆ.

​ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿಜಯಪುರ ಪೊಲೀಸ್ ಇನ್‌ಸ್ಪೆಕ್ಟರ್ ಲಕ್ಷ್ಮೀನಾರಾಯಣ ಅವರ ನೇತೃತ್ವದ ತಂಡ ಈ ಭರ್ಜರಿ ಕಾರ್ಯಾಚರಣೆ ನಡೆಸಿದೆ.

​ಪ್ರಕರಣ ದಾಖಲು:

ಬಂಧಿತ ಆರೋಪಿಯ ವಿರುದ್ಧ ಹೊಸ ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆಯ ಕಲಂ 303(2), 331(3) ಹಾಗೂ 305(ಎ) ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ವಿಜಯಪುರ ಠಾಣೆ ಪೊಲೀಸರು ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!