ಟ್ರೆಂಡಿಂಗ್ ಸುದ್ದಿಗಳುರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್

ಪತಿ ವಿಡಿಯೋ ಕಾಲ್ ರಿಸೀವ್ ಮಾಡಿಲ್ಲವೆಂದು ಮನನೊಂದು ಪತ್ನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ

Share News

ಮಹಬೂಬಾಬಾದ್ (ತೆಲಂಗಾಣ): ಪತಿ ವಿಡಿಯೋ ಕಾಲ್ ಸ್ವೀಕರಿಸಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಮನನೊಂದ 20 ವರ್ಷದ ವಿವಾಹಿತ ಮಹಿಳೆಯೊಬ್ಬರು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ತೆಲಂಗಾಣದ ಮಹಬೂಬಾಬಾದ್‌ನಲ್ಲಿ ನಡೆದಿದೆ.

​ವಾರಂಗಲ್ ಜಿಲ್ಲೆಯ ನೆಕ್ಕೊಂಡ ಮಂಡಲದ ಬೊಳ್ಳಿಕೊಂಡ ಗ್ರಾಮದ ಅಖಿಲಾ (20) ಮೃತ ದುರ್ದೈವಿ. ಈಕೆಗೆ ಸುಮಾರು ಎರಡು ವರ್ಷಗಳ ಹಿಂದೆ ಮಹಬೂಬಾಬಾದ್‌ನ ಹೌಸಿಂಗ್ ಫೈನಾನ್ಸ್ ಮ್ಯಾನೇಜರ್ ಬನೋತ್ ಹುಸೇನ್ ಅವರೊಂದಿಗೆ ವಿವಾಹವಾಗಿದ್ದು, ದಂಪತಿಗೆ ಒಂದು ಚಿಕ್ಕ ಮಗುವಿದೆ.

​ಘಟನೆಯ ವಿವರ:

ಇತ್ತೀಚೆಗೆ ಅಖಿಲಾ ತಮ್ಮ ತವರು ಮನೆಯಲ್ಲಿದ್ದರು. ಸೆಪ್ಟೆಂಬರ್ 2ರಂದು ಮಗು ಅಳುತ್ತಿದ್ದಾಗ, ಮಗುವನ್ನು ತಂದೆಯೊಂದಿಗೆ ಮಾತನಾಡಿಸಲು ಪತಿಗೆ ವಿಡಿಯೋ ಕಾಲ್ ಮಾಡಿದ್ದಾರೆ. ಆದರೆ ಹುಸೇನ್ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ತೀವ್ರವಾಗಿ ಬೇಸರಗೊಂಡ ಅಖಿಲಾ, ತರುವಾಯ ಮಹಬೂಬಾಬಾದ್‌ನಲ್ಲಿರುವ ಅತ್ತೆ-ಮಾವನ ಮನೆಗೆ ವಾಪಸ್ ಬಂದು ಇಲಿ ಪಾಷಾಣ ಸೇವಿಸಿದ್ದಾರೆ.

​ಚಿಕಿತ್ಸೆ ಫಲಿಸದೆ ಸಾವು:

ಅಖಿಲಾ ಅಸ್ವಸ್ಥಗೊಂಡಿರುವುದನ್ನು ಗಮನಿಸಿದ ಕುಟುಂಬಸ್ಥರು ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮುಂಜಾನೆ ಆಕೆ ಕೊನೆಯುಸಿರೆಳೆದಿದ್ದಾಳೆ.

​ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆತ್ಮಹತ್ಯೆಗೆ ಬೇರೆನಾದರೂ ಕಾರಣಗಳಿವೆಯೇ ಎಂಬ ಕುರಿತು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!