ಉಪಯುಕ್ತ ಮಾಹಿತಿಗಳುಕ್ರೈಂ ಸುದ್ದಿಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ಆನೇಕಲ್: ರಸ್ತೆ ಬದಿ ಅಡ್ಡದಿಡ್ಡಿ ಪಾರ್ಕಿಂಗ್‌ಗೆ ಪೊಲೀಸ್ ಬ್ರೇಕ್; ನಿಯಮ ಉಲ್ಲಂಘಿಸಿದರೆ ಬಿಳಲಿದೆ ವ್ಹೀಲ್ ಲಾಕ್!

Share News

ಆನೇಕಲ್: ಪಟ್ಟಣದಲ್ಲಿ ರಸ್ತೆ ಬದಿಗಳಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನಗಳನ್ನು ಎಲ್ಲೆಂದರಲ್ಲಿ ಅಕ್ರಮವಾಗಿ ಪಾರ್ಕಿಂಗ್ ಮಾಡುವವರ ವಿರುದ್ಧ ಆನೇಕಲ್ ಪೊಲೀಸರು ಸಮರ ಸಾರಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿ ವಾಹನ ನಿಲ್ಲಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಪೊಲೀಸರು, ‘ವ್ಹೀಲ್ ಲಾಕ್’ (Wheel Lock) ಬಳಸಿ ಸ್ಥಳದಲ್ಲೇ ದಂಡ ವಿಧಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ.

​ಪಟ್ಟಣದ ಪ್ರಮುಖ ವೃತ್ತಗಳು ಹಾಗೂ ಮುಖ್ಯ ರಸ್ತೆಗಳಲ್ಲಿ ವಾಹನಗಳನ್ನು ಅಡ್ಡದಿಡ್ಡಿಯಾಗಿ ನಿಲ್ಲಿಸುವುದರಿಂದ ಸಾರ್ವಜನಿಕರ ಮುಕ್ತ ಓಡಾಟಕ್ಕೆ ಹಾಗೂ ಸುಗಮ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿತ್ತು. ಸಂಚಾರ ದಟ್ಟಣೆಗೆ ಕಾರಣವಾಗುತ್ತಿದ್ದ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ರಸ್ತೆ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಈ ಬಿಗಿ ಕ್ರಮ ಕೈಗೊಂಡಿದ್ದಾರೆ.

​”ವಾಹನ ಸವಾರರು ಕಡ್ಡಾಯವಾಗಿ ನಿಗದಿತ ಪಾರ್ಕಿಂಗ್ ಸ್ಥಳಗಳಲ್ಲಿ ಮಾತ್ರ ತಮ್ಮ ವಾಹನಗಳನ್ನು ನಿಲ್ಲಿಸಬೇಕು. ರಸ್ತೆ ಬದಿಗಳಲ್ಲಿ ಅಸ್ತವ್ಯಸ್ತವಾಗಿ ವಾಹನ ನಿಲ್ಲಿಸುವುದನ್ನು ತಡೆದು, ಪೊಲೀಸರೊಂದಿಗೆ ಸಹಕರಿಸುವ ಮೂಲಕ ಅನಗತ್ಯ ದಂಡದಿಂದ ಪಾರಾಗಬೇಕು.”

​ಸಂಚಾರ ನಿಯಮಗಳನ್ನು ಉಲ್ಲಂಘಿಸಿ ರಸ್ತೆ ಸುರಕ್ಷತೆಗೆ ಅಡ್ಡಿಪಡಿಸುವ ಸವಾರರ ವಿರುದ್ಧ ಮುಂದಿನ ದಿನಗಳಲ್ಲಿ ಕಾನೂನು ಕ್ರಮವನ್ನು ಇನ್ನಷ್ಟು ಕಠಿಣಗೊಳಿಸಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!