ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹಿರಿಯ ಅಧಿಕಾರಿಗಳ ಜಂಟಿ ಸ್ಥಳ ಪರಿಶೀಲನೆ

Share News

ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಪ್ರಮುಖ ಜಂಕ್ಷನ್‌ಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಮುಕ್ತಿ ಹಾಡಲು ಹಾಗೂ ಸಾರ್ವಜನಿಕರಿಗೆ ಸುಗಮ, ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಮುಖ ಕ್ರಮ ಕೈಗೊಂಡಿದ್ದಾರೆ.

​ಈ ಸಂಬಂಧ ಪಾಲಿಕೆ ಆಯುಕ್ತರಾದ ಶ್ರೀ ಡಿ.ಎಸ್. ರಮೇಶ್ ಹಾಗೂ ಜಂಟಿ ಪೊಲೀಸ್ ಆಯುಕ್ತರಾದ (ಸಂಚಾರ) ಶ್ರೀ ಕಾರ್ತಿಕ್ ರೆಡ್ಡಿ ಅವರು ಜಂಟಿಯಾಗಿ ವಿವಿಧ ಪ್ರಮುಖ ಜಂಕ್ಷನ್‌ಗಳಲ್ಲಿ ಪ್ರತ್ಯಕ್ಷ ಸ್ಥಳ ಪರಿಶೀಲನೆ ನಡೆಸಿದರು.

​ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಜಂಕ್ಷನ್‌ಗಳಲ್ಲಿ ಎದುರಾಗುತ್ತಿರುವ ಸಂಚಾರ ಅಡೆತಡೆಗಳು, ಸಿಗ್ನಲ್ ವ್ಯವಸ್ಥೆ ಹಾಗೂ ರಸ್ತೆ ಅಗಲೀಕರಣ/ಬದಲಾವಣೆಗಳ ಕುರಿತು ಸಮಗ್ರವಾಗಿ ಪರಿಶೀಲಿಸಲಾಯಿತು. ವಾಹನ ಸವಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಶಮನಗೊಳಿಸಿ, ಸಂಚಾರ ಹರಿವನ್ನು ಸುಲಭಗೊಳಿಸಲು ಕೈಗೊಳ್ಳಬೇಕಾದ ಅಗತ್ಯ ಸುಧಾರಣಾ ಕ್ರಮಗಳ ಕುರಿತು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಇಬ್ಬರೂ ಹಿರಿಯ ಅಧಿಕಾರಿಗಳು ಸೂಕ್ತ ಸೂಚನೆ ಹಾಗೂ ಮಾರ್ಗದರ್ಶನ ನೀಡಿದರು.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!