‘ಟೀಮ್ ಕರ್ನಾಟಕ’ ಆಶಯದೊಂದಿಗೆ ಆಡಳಿತದಲ್ಲಿ ಶಿಸ್ತು ಹಾಗೂ ಪಾರದರ್ಶಕತೆಗೆ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ

‘ಟೀಮ್ ಕರ್ನಾಟಕ’ ಆಶಯದೊಂದಿಗೆ ಆಡಳಿತದಲ್ಲಿ ಶಿಸ್ತು ಹಾಗೂ ಪಾರದರ್ಶಕತೆಗೆ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ
ಬೆಳಗಾವಿ: ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರೊಂದಿಗೆ ನಡೆದ ಮಹತ್ವದ ವಿಡಿಯೋ ಸಂವಾದದಲ್ಲಿ, ‘ಟೀಮ್ ಕರ್ನಾಟಕ’ ಎಂಬ ಸಶಕ್ತ ಆಶಯದೊಂದಿಗೆ ಜನಪರ ಆಡಳಿತ ನೀಡಲು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದ್ದಾರೆ.
ಸಂವಾದದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಆಡಳಿತ ವ್ಯವಸ್ಥೆಯಲ್ಲಿ ಶಿಸ್ತು ಮತ್ತು ಪಾರದರ್ಶಕತೆ ತರುವುದು, ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆ (Zero Tolerance) ಕಾಯ್ದುಕೊಳ್ಳುವುದು ಹಾಗೂ ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ಪರಿಣಾಮಕಾರಿಯಾಗಿ ತಲುಪಿಸುವ ಕುರಿತು ಕಟ್ಟುನಿಟ್ಟಿನ ಮಾರ್ಗದರ್ಶನ ನೀಡಿದರು. ಸಾರ್ವಜನಿಕರ ಕುಂದು-ಕೊರತೆಗಳಿಗೆ ಸ್ಥಳೀಯ ಮಟ್ಟದಲ್ಲೇ ತ್ವರಿತ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಸುವರ್ಣ ಸೌಧದಿಂದ ಸಂವಾದದಲ್ಲಿ ಭಾಗಿ:
ಬೆಳಗಾವಿಯ ಸುವರ್ಣ ಸೌಧದಿಂದ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಪ್ರಮುಖರು, ಜಿಲ್ಲೆಯಲ್ಲಿ ಸರ್ಕಾರದ ಜನಪರ ಯೋಜನೆಗಳು ಹಾಗೂ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಹಾಗೂ ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸ್ಥಳೀಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
“ಜನಸೇವೆಯೇ ನಮ್ಮ ಪ್ರಥಮ ಆದ್ಯತೆ — ಸಮಗ್ರ ಅಭಿವೃದ್ಧಿಯೇ ನಮ್ಮ ಮುಖ್ಯ ಸಂಕಲ್ಪ” ಎಂಬ ಧ್ವೇಯದೊಂದಿಗೆ ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಆಡಳಿತ ಯಂತ್ರ ಚುರುಕಿನಿಂದ ಕೆಲಸ ಮಾಡಬೇಕಿದೆ ಎಂದು ಈ ಸಂದರ್ಭದಲ್ಲಿ ಪುನರುಚ್ಚರಿಸಲಾಯಿತು.



