ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ಬಸವನಕೊಳ್ಳ 31 MLD ಶುದ್ಧ ನೀರಿನ ಯೋಜನೆ ಕಾಮಗಾರಿ ಪರಿಶೀಲಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

Share News

ಬೆಳಗಾವಿ: ನಗರದ ಬಸವನಕೊಳ್ಳದಲ್ಲಿ ನಿರ್ಮಾಣವಾಗುತ್ತಿರುವ 31 MLD ಸಾಮರ್ಥ್ಯದ ಶುದ್ಧ ನೀರಿನ ಘಟಕದ ಕಾಮಗಾರಿ ಸ್ಥಳಕ್ಕೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಉನ್ನತಾಧಿಕಾರಿಗಳೊಂದಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.

​ಪರಿಶೀಲನೆ ವೇಳೆಯಲ್ಲಿ ಯೋಜನೆಯ ತಾಂತ್ರಿಕ ಅಂಶಗಳು, ಅನುಷ್ಠಾನದ ವಿವಿಧ ಹಂತಗಳು ಹಾಗೂ ಕಾಮಗಾರಿಯ ಗುಣಮಟ್ಟದ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ವಿವಿರವಾದ ಮಾಹಿತಿ ಪಡೆದುಕೊಂಡರು.

ಈಗಾಗಲೇ ಯೋಜನೆಯ ಸುಮಾರು ಶೇ. 70ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಇರುವ ಉಳಿದ ಕೆಲಸಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬೆಳಗಾವಿ ನಗರದ ಜನತೆಗೆ ನಿರಂತರ ಹಾಗೂ ಸುರಕ್ಷಿತ ಕುಡಿಯುವ ನೀರನ್ನು ಪೂರೈಸುವ ಮಹತ್ವಾಕಾಂಕ್ಷಿ ಉದ್ದೇಶದಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಆದ್ದರಿಂದ ಯಾವುದೇ ವಿಳಂಬವಿಲ್ಲದೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

​ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಯೋಜನೆಯ ವಿನ್ಯಾಸ ಮತ್ತು ನಿರ್ಮಾಣ ಉಸ್ತುವಾರಿ ವಹಿಸಿರುವ ಇಂಜಿನಿಯರ್‌ಗಳು ಉಪಸ್ಥಿತರಿದ್ದರು.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!