ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ಹೊಸೂರು ರಸ್ತೆ – ಬರ್ಲಿ ಸ್ಟ್ರೀಟ್‌ನಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ

Share News

ಬೆಂಗಳೂರು: ಸಾರ್ವಜನಿಕರ ಹಾಗೂ ಪಾದಚಾರಿಗಳ ಸುರಕ್ಷಿತ ಮತ್ತು ಸುಗಮ ಸಂಚಾರವನ್ನು ಖಚಿತಪಡಿಸುವ ನಿಟ್ಟಿನಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಶಾಂತಿನಗರ ವಿಭಾಗದ ವತಿಯಿಂದ ಹೊಸೂರು ರಸ್ತೆ – ಬರ್ಲಿ ಸ್ಟ್ರೀಟ್ ಬಳಿ ಬೃಹತ್ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಲಾಯಿತು.

​ಪಾದಚಾರಿ ಮಾರ್ಗಗಳನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದ ಅಂಗಡಿ-ಮುಂಗಟ್ಟುಗಳು ಹಾಗೂ ತಾತ್ಕಾಲಿಕ ಶೇಡ್‌ಗಳನ್ನು ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತೆರವುಗೊಳಿಸಿದರು.

​ಅಕ್ರಮ ಒತ್ತುವರಿ ತೆರವು: ಬರ್ಲಿ ಸ್ಟ್ರೀಟ್ ಭಾಗದ ಪಾದಚಾರಿ ಮಾರ್ಗದ ಮೇಲಿದ್ದ ಎಲ್ಲಾ ರೀತಿಯ ಅಕ್ರಮ ಒತ್ತುವರಿಗಳನ್ನು ತೆರವುಗೊಳಿಸಿ, ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು.

​ಸುರಕ್ಷಿತ ಪಾದಚಾರಿ ಸಂಚಾರ: ಪಾದಚಾರಿಗಳು ಯಾವುದೇ ಅಡೆತಡೆಯಿಲ್ಲದೆ, ಸುರಕ್ಷಿತವಾಗಿ ರಸ್ತೆಯ ಪಕ್ಕದಲ್ಲಿ ಸಂಚರಿಸಲು ಮಾರ್ಗವನ್ನು ಮುಕ್ತಗೊಳಿಸಲಾಯಿತು.

​ವ್ಯಾಪಾರಿಗಳಿಗೆ ಮುನ್ನೆಚ್ಚರಿಕೆ: ಸಾರ್ವಜನಿಕ ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಪುನಃ ಒತ್ತುವರಿ ಮಾಡಿಕೊಳ್ಳದಂತೆ ಮತ್ತು ಪಾದಚಾರಿಗಳ ಹಕ್ಕನ್ನು ಕಸಿಯದಂತೆ ಸ್ಥಳೀಯ ವ್ಯಾಪಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

​ಪಾದಚಾರಿ ಮಾರ್ಗಗಳನ್ನು ಸದಾ ಸಾರ್ವಜನಿಕ ಬಳಕೆಗೆ ಮುಕ್ತವಾಗಿರಿಸುವ ಉದ್ದೇಶದಿಂದ ನಗರ ಪಾಲಿಕೆಯು ಈ ರೀತಿಯ ಕಾರ್ಯಾಚರಣೆಗಳನ್ನು ನಿಯಮಿತವಾಗಿ ಮುಂದುವರಿಸಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!