ಉಪಯುಕ್ತ ಮಾಹಿತಿಗಳುರಾಜ್ಯ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಮುಂದೂಡಿಕೆ: ಶೀಘ್ರದಲ್ಲೇ ಹೊಸ ದಿನಾಂಕ ಘೋಷಣೆ

Share News

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಏಪ್ರಿಲ್ 7ರ ಮಂಗಳವಾರದಂದು ಪ್ರಕಟಿಸಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಿದೆ.

ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಫಲಿತಾಂಶ ಪ್ರಕಟಿಸಲು ಅನುಮತಿ ಕೋರಿ ಮಂಡಳಿಯು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಆಯೋಗದಿಂದ ಅಧಿಕೃತ ಪ್ರತಿಕ್ರಿಯೆಗಾಗಿ ಕಾಯುತ್ತಿರುವುದರಿಂದ ಇಂದು ಫಲಿತಾಂಶ ಬಿಡುಗಡೆಯಾಗುತ್ತಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇದೇ ಮೊದಲ ಬಾರಿಗೆ ಪರೀಕ್ಷೆಗೂ ಮುನ್ನವೇ ಫಲಿತಾಂಶದ ಸಂಭಾವ್ಯ ದಿನಾಂಕವನ್ನು ಘೋಷಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಉಂಟಾದ ಈ ಬದಲಾವಣೆಯು ವಿದ್ಯಾರ್ಥಿಗಳಲ್ಲಿ ಕುತೂಹಲ ಮತ್ತು ಆತಂಕ ಮೂಡಿಸಿದೆ. ಒಂದು ವೇಳೆ ಇಂದು ಆಯೋಗದಿಂದ ಅನುಮತಿ ದೊರೆತರೆ, ಏಪ್ರಿಲ್ 8ರ ಬುಧವಾರದಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.

ಮತ್ತೊಂದೆಡೆ, ಫಲಿತಾಂಶ ಪ್ರಕಟಣೆಗೆ ಆಯೋಗದಿಂದ ಈಗಾಗಲೇ ಹಸಿರು ನಿಶಾನೆ ಸಿಕ್ಕಿದೆ ಎಂಬ ಮಾಹಿತಿಯೂ ಕೇಳಿಬರುತ್ತಿದೆ. ಆದರೆ ಉಪಚುನಾವಣೆ ಪ್ರಚಾರದಲ್ಲಿ ಸಚಿವರು ಬ್ಯುಸಿಯಾಗಿರುವುದರಿಂದ ಮತ್ತು ಅವರ ಲಭ್ಯತೆ ಇಲ್ಲದ ಕಾರಣ ಫಲಿತಾಂಶ ವಿಳಂಬವಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

​ಫಲಿತಾಂಶ ಪ್ರಕಟಣೆಯ ನಿಖರ ದಿನಾಂಕ ಮತ್ತು ಸಮಯದ ಕುರಿತು ಇಂದು ಸಂಜೆ ಮಂಡಳಿಯು ಅಧಿಕೃತ ಪ್ರಕಟಣೆ ಹೊರಡಿಸಲಿದೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!