ಉಪಯುಕ್ತ ಮಾಹಿತಿಗಳುಕ್ರೈಂ ಸುದ್ದಿಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ಶಾಲಾ-ಕಾಲೇಜುಗಳ ಬಳಿ ತಂಬಾಕು ಮಾರಾಟಕ್ಕೆ ಬ್ರೇಕ್; 48 ಶೈಕ್ಷಣಿಕ ಸಂಸ್ಥೆಗಳಲ್ಲಿ ಅರಿವು ಕಾರ್ಯಾಗಾರ

Share News

ಮಡಿಕೇರಿ: ಕೊಡಗು ಜಿಲ್ಲಾದ್ಯಂತ ತಂಬಾಕು ಉತ್ಪನ್ನಗಳ ಬಳಕೆಯ ದುಷ್ಪರಿಣಾಮಗಳನ್ನು ತಡೆಯಲು ಹಾಗೂ ಕೋಟ್ಪಾ (COTPA) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಭರ್ಜರಿ ಕಾರ್ಯಾಚರಣೆ ನಡೆಸಿದೆ. 2026-27ನೇ ಸಾಲಿನ ಏಪ್ರಿಲ್‌ನಿಂದ ಜೂನ್‌ವರೆಗಿನ ಅವಧಿಯಲ್ಲಿ ಜಿಲ್ಲಾದ್ಯಂತ ಒಟ್ಟು 34 ತನಿಖಾ ದಾಳಿಗಳನ್ನು ನಡೆಸಿ, ಕಾಯ್ದೆ ಉಲ್ಲಂಘಿಸಿದವರ ವಿರುದ್ಧ 360 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ತಿಳಿಸಿದ್ದಾರೆ.

​ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ: ಸೆಕ್ಷನ್ 21 ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದುವ ವ್ಯಕ್ತಿಗಳಿಗೆ ಸ್ಥಳದಲ್ಲೇ ₹1,000 ರವರೆಗೆ ದಂಡ ವಿಧಿಸಲಾಗುತ್ತಿದೆ. ದಂಡ ಪಾವತಿಸಲು ನಿರಾಕರಿಸಿದರೆ ಕೋರ್ಟ್ ಚಲನ್ ನೀಡಲಾಗುವುದು.

​ಶಾಲಾ-ಕಾಲೇಜುಗಳ ಬಳಿ ತಂಬಾಕು ನಿಷೇಧ (ಸೆಕ್ಷನ್ 6ಬಿ): ಶೈಕ್ಷಣಿಕ ಸಂಸ್ಥೆಗಳ 100 ಗಜ (ಯಾರ್ಡ್) ಅಂತರದ ಒಳಗೆ ತಂಬಾಕು ಉತ್ಪನ್ನ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ನಿಯಮ ಉಲ್ಲಂಘಿಸಿದ 7 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, ಶಾಲೆಗಳ ಮುಖ್ಯಸ್ಥರು ಹಾಗೂ ಪೊಲೀಸರಿಗೆ ₹1,000 ವರೆಗೆ ದಂಡ ವಿಧಿಸುವ ಅಧಿಕಾರ ನೀಡಲಾಗಿದೆ.

​ಬಿಡಿ ಸಿಗರೇಟ್ ಮಾರಾಟ ಹಾಗೂ ಜಾಹೀರಾತು ನಿಷೇಧ: ಬಿಡಿ ಬಿಡಿಯಾಗಿ ಸಿಗರೇಟು ಮಾರಾಟ ಮಾಡುವುದು, ತಂಬಾಕು ಉತ್ಪನ್ನಗಳ ನೇರ ಅಥವಾ ಪರೋಕ್ಷ ಜಾಹೀರಾತು ನೀಡುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

​ಶೇ.85 ರಷ್ಟು ಎಚ್ಚರಿಕೆ ಚಿತ್ರ ಕಡ್ಡಾಯ (ಸೆಕ್ಷನ್ 7): ತಂಬಾಕು ಪ್ಯಾಕೇಟ್‌ಗಳ ಮೇಲೆ ಶೇ.85 ರಷ್ಟು ಆರೋಗ್ಯ ಎಚ್ಚರಿಕೆ ಸಂದೇಶವಿಲ್ಲದೆ ಮಾರಾಟ ಮಾಡಿದರೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ 48 ಶಾಲಾ-ಕಾಲೇಜುಗಳಲ್ಲಿ ತಂಬಾಕು ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಕಾರ್ಯಾಗಾರ ನಡೆಸಲಾಗಿದೆ. ಪ್ರತಿಯೊಂದು ಶೈಕ್ಷಣಿಕ ಸಂಸ್ಥೆಯಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚಿಸಿ, ಪ್ರತಿ 6 ತಿಂಗಳಿಗೊಮ್ಮೆ ಸಭೆ ನಡೆಸಲು ಸೂಚಿಸಲಾಗಿದೆ. ಮಾರ್ಗಸೂಚಿಯಂತೆ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ಶಾಲಾ-ಕಾಲೇಜುಗಳನ್ನು ‘ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆ’ ಎಂದು ಘೋಷಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಿಗೆ ಚಿತ್ರಕಲೆ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ.

ತಂಬಾಕು ಚಟದಿಂದ ಹೊರಬರಲು ನೆರವಾಗುವ ತಂಬಾಕು ವ್ಯಸನ ಮುಕ್ತ ಕೇಂದ್ರದ ಮೂಲಕ ಏಪ್ರಿಲ್-ಜೂನ್ ಅವಧಿಯಲ್ಲಿ ಒಟ್ಟು 2,519 ಜನರಿಗೆ ಸ್ಕ್ರೀನಿಂಗ್ ನಡೆಸಲಾಗಿದ್ದು, 1,885 ಜನರಿಗೆ ಆಪ್ತ ಸಮಾಲೋಚನೆ (Counseling) ನೀಡಲಾಗಿದೆ. ಅಲ್ಲದೆ 2,170 ನಿಕೋಟಿನ್ ಗಮ್‌ಗಳನ್ನು ವಿತರಿಸಿ ವ್ಯಸನಮುಕ್ತರನ್ನಾಗಿ ಮಾಡಲು ಶ್ರಮಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!