ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್

ನಮ್ಮ ಕರ್ನಾಟಕ ಸೇನೆಯ ನೂತನ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಎಂ. ಪರಮೇಶ್ ಆಯ್ಕೆ

Share News

ಬೆಂಗಳೂರು: ನಮ್ಮ ಕರ್ನಾಟಕ ಸೇನೆಯ ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಎಂ. ಪರಮೇಶ್ ಅವರನ್ನು ರಾಜ್ಯಾಧ್ಯಕ್ಷರಾದ ಶ್ರೀ ಎಂ. ಬಸವರಾಜ ಪಡುಕೋಟೆ ಅವರು ನೇಮಕಗೊಳಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

​ದಿನಾಂಕ 10-09-2026 ರಂದು ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ, ರಾಜ್ಯಾಧ್ಯಕ್ಷರಾದ ಎಂ. ಬಸವರಾಜ್ ಪಡುಕೋಟೆ ಅವರು ನೂತನ ಜಿಲ್ಲಾಧ್ಯಕ್ಷ ಎಂ. ಪರಮೇಶ್ ಅವರಿಗೆ ಕನ್ನಡದ ಶಾಲು ಹೊದಿಸಿ ಆತ್ಮೀಯವಾಗಿ ಗೌರವಿಸಿದರು.

​ಸಂಘಟನೆ ಬಲವರ್ಧನೆಗೆ ಸೂಚನೆ:

ಶಿವಮೊಗ್ಗ ಜಿಲ್ಲೆಯಾದ್ಯಂತ ಸಂಘಟನೆಯನ್ನು ಬಲಪಡಿಸಲು ಜಿಲ್ಲಾ ಉಸ್ತುವಾರಿ ಸುಜಯ್ ಪೂಜಾರಿ ಹಾಗೂ ನೂತನ ಜಿಲ್ಲಾಧ್ಯಕ್ಷ ಎಂ. ಪರಮೇಶ್ ಅವರ ಜಂಟಿ ನೇತೃತ್ವದಲ್ಲಿ ಚಟುವಟಿಕೆಗಳನ್ನು ಮುನ್ನಡೆಸಿಕೊಂಡು ಹೋಗುವಂತೆ ರಾಜ್ಯಾಧ್ಯಕ್ಷರು ಈ ಸಂದರ್ಭದಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

​ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷರಾದ ಅನಿಲ್ ಬಿ. ಶೆಟ್ಟಿ, ಮಹಿಳಾ ಘಟಕದ ರಾಜ್ಯ ನಾಯಕಿ ಸುನಿತಾ ಗೌಡ ಸೇರಿದಂತೆ ಹಲವು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!