ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿತಾಲೂಕುರಾಜ್ಯ ಸುದ್ದಿ

ಪಿಯುಸಿ ಮೌಲ್ಯಮಾಪನ ಬಹಿಷ್ಕಾರಕ್ಕೆ ಅನುದಾನಿತ ಕಾಲೇಜು ನೌಕರರ ಸಂಘದ ಬೆಂಬಲ: ಮಾರ್ಚ್ 20ರಿಂದ ಹೋರಾಟ ತೀವ್ರ!

Share News

ದೊಡ್ಡಬಳ್ಳಾಪುರ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯದ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ನಡೆಸುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಬಹಿಷ್ಕಾರದ ಹೋರಾಟಕ್ಕೆ ‘ಕರ್ನಾಟಕ ರಾಜ್ಯ ಅನುದಾನಿತ ಪದವಿಪೂರ್ವ ಕಾಲೇಜುಗಳ ನೌಕರರ ಸಂಘ’ ಅಧಿಕೃತ ಬೆಂಬಲ ಘೋಷಿಸಿದೆ.

ತಾಲ್ಲೂಕಿನ ಮಾರಸಂದ್ರದ ಪಿ.ಕೆ.ಬಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತು ಸಂಘದ ಅಧ್ಯಕ್ಷ ಡಾ. ಎಸ್. ಹರೀಶ್, ಗೌರವ ಅಧ್ಯಕ್ಷ ಡಾ. ಆರ್. ಕೃಷ್ಣಮೂರ್ತಿ ಮತ್ತು ಪ್ರಧಾನ ಕಾರ್ಯದರ್ಶಿ ಎಂ. ಆನಂದ್ ಜಂಟಿ ಪ್ರಕಟಣೆ ನೀಡಿದ್ದಾರೆ.

ಉಪನ್ಯಾಸಕರು ಈ ಬಾರಿ ಮೌಲ್ಯಮಾಪನದಿಂದ ದೂರ ಉಳಿಯಲು ಪ್ರಮುಖವಾಗಿ ಈ ಕೆಳಗಿನ ಕಾರಣಗಳನ್ನು ಮುಂದಿಟ್ಟಿದ್ದಾರೆ:

ಇಲಾಖೆ ವರ್ಗಾವಣೆಗೆ ವಿರೋಧ: ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗಳ ನಿಯಂತ್ರಣವನ್ನು ಜಿಲ್ಲಾ ಪಂಚಾಯತ್‌ಗಳಿಗೆ ವರ್ಗಾಯಿಸುವ ಸರ್ಕಾರದ ಪ್ರಸ್ತಾವನೆಯನ್ನು ಸಂಘವು ತೀವ್ರವಾಗಿ ವಿರೋಧಿಸಿದೆ.

ಅನುಪಾತ ಇಳಿಕೆ: ಇಲಾಖೆಯಲ್ಲಿ ಪ್ರಸ್ತುತ ಇರುವ ವಿದ್ಯಾರ್ಥಿ ಮತ್ತು ಉಪನ್ಯಾಸಕರ ಅನುಪಾತವನ್ನು ಕಡಿಮೆ ಮಾಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.

ನಿಯೋಜನೆಗೆ ಒತ್ತಾಯ: ಕಾರ್ಯಭಾರದ ಕೊರತೆ ಇರುವ ಅನುದಾನಿತ ಕಾಲೇಜುಗಳ ಉಪನ್ಯಾಸಕರನ್ನು ಸಮೀಪದ ಸರ್ಕಾರಿ ಕಾಲೇಜುಗಳಿಗೆ ನಿಯೋಜಿಸುವಂತೆ ಒತ್ತಾಯಿಸಲಾಗಿದೆ.

ಆದೇಶ ಜಾರಿಗೆ ವಿಳಂಬ: ಈ ಎಲ್ಲಾ ವಿಷಯಗಳ ಕುರಿತು ಶಿಕ್ಷಣ ಸಚಿವರು ಮತ್ತು ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದರೂ, ಈವರೆಗೆ ಯಾವುದೇ ಅಧಿಕೃತ ಆದೇಶ ಹೊರಡಿಸದಿರುವುದು ಉಪನ್ಯಾಸಕರ ಅಸಮಾಧಾನಕ್ಕೆ ಕಾರಣವಾಗಿದೆ.

ನಮ್ಮ ಬೇಡಿಕೆಗಳ ಕುರಿತು ಕೇವಲ ಭರವಸೆ ನೀಡಲಾಗುತ್ತಿದೆಯೇ ಹೊರತು ಅನುಷ್ಠಾನಕ್ಕೆ ಬರುತ್ತಿಲ್ಲ. ಹೀಗಾಗಿ ಹೋರಾಟವನ್ನು ತೀವ್ರಗೊಳಿಸುವ ಉದ್ದೇಶದಿಂದ ಮಾರ್ಚ್ 20ರಿಂದ ಪ್ರಾರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನವನ್ನು ಸಂಪೂರ್ಣವಾಗಿ ಬಹಿಷ್ಕರಿಸಲಾಗುವುದು,” ಎಂದು ಸಂಘದ ಮುಖಂಡರು ಎಚ್ಚರಿಸಿದ್ದಾರೆ.

ಪಿಯುಸಿ ಮೌಲ್ಯಮಾಪನ ಬಹಿಷ್ಕಾರದಿಂದ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದ್ದು, ಸರ್ಕಾರವು ಈ ಕೂಡಲೇ ಮಧ್ಯಪ್ರವೇಶಿಸಿ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!