ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ಶಾಂತಿ ಸುವ್ಯವಸ್ಥೆ ಕಾಪಾಡಲು ಭಟ್ಕಳ ತಾಲೂಕಿನಲ್ಲಿ ಎರಡು ದಿನ ಮದ್ಯ ಮಾರಾಟ ಸಂಪೂರ್ಣ ನಿಷೇಧ: ಜಿಲ್ಲಾಧಿಕಾರಿ ಆದೇಶ

Share News

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ನಡೆಯಲಿರುವ ಪ್ರಸಿದ್ಧ ಶ್ರೀ ಮಾರಿ ಜಾತ್ರೆಯ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನಾದ್ಯಂತ ಎರಡು ದಿನಗಳ ಕಾಲ ಮದ್ಯ ಮಾರಾಟ ಹಾಗೂ ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

​ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಆಗಸ್ಟ್ 5ರ ಬೆಳಿಗ್ಗೆ 5 ಗಂಟೆಯಿಂದ ಆಗಸ್ಟ್ 6ರ ಮಧ್ಯರಾತ್ರಿ 12 ಗಂಟೆಯವರೆಗೆ ಭಟ್ಕಳ ತಾಲೂಕು ವ್ಯಾಪ್ತಿಯ ಎಲ್ಲಾ ರೀತಿಯ ಮದ್ಯದ ಅಂಗಡಿಗಳು, ವೈನ್ ಶಾಪ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಸಂಪೂರ್ಣವಾಗಿ ಬಂದ್ ಮಾಡುವಂತೆ ಸೂಚಿಸಿದ್ದಾರೆ.

​ಈ ಅವಧಿಯಲ್ಲಿ ತಾಲೂಕಿನಾದ್ಯಂತ ಯಾವುದೇ ರೀತಿಯ ಮದ್ಯ ಸಾಗಾಟ ಹಾಗೂ ಅಕ್ರಮ ಮಾರಾಟ ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಜಾತ್ರೆ ಮತ್ತು ಸಾರ್ವಜನಿಕ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯಲು ಸಾರ್ವಜನಿಕರು ಹಾಗೂ ವರ್ತಕರು ಜಿಲ್ಲಾಡಳಿತದ ಈ ಆದೇಶಕ್ಕೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!