ಜಿಲ್ಲಾ ಸುದ್ದಿಕ್ರೈಂ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಪಾಕ್ ಜೊತೆ ನಿರಂತರ ಸಂಪರ್ಕ: ಕಲಬುರಗಿಯಲ್ಲಿ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದ ಯುಪಿ ಎಟಿಎಸ್!

Share News

ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಇಬ್ಬರು ಶಂಕಿತರನ್ನು ಉತ್ತರ ಪ್ರದೇಶದ ಆಂಟಿ ಟೆರರಿಸ್ಟ್ ಸ್ಕ್ವಾಡ್ (UP ATS) ಅಧಿಕಾರಿಗಳು ಕಲಬುರಗಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆ (IB) ನೀಡಿದ ನೀಡಿದ ಖಚಿತ ಮಾಹಿತಿ ಆಧರಿಸಿ ಈ ಕಾರ್ಯಾಚರಣೆ ನಡೆದಿದೆ.

​ವಾಟ್ಸಾಪ್, ಫೇಸ್‌ಬುಕ್ ಮೂಲಕ ಸಂಪರ್ಕ:

ವಶಕ್ಕೆ ಪಡೆಯಲಾದ ಆರೋಪಿಗಳನ್ನು ಉತ್ತರ ಪ್ರದೇಶದ ವಸತಿ ವಿಳಾಸ ಹೊಂದಿರುವ ಸಮೀರ್ ಹಾಗೂ ಸಲ್ಮಾನ್ ಎಂದು ಗುರುತಿಸಲಾಗಿದೆ. ಇಬ್ಬರೂ ಆರೋಪಿಗಳು ವಾಟ್ಸಾಪ್ ಕಾಲ್ ಹಾಗೂ ಫೇಸ್‌ಬುಕ್ ಮುಖಾಂತರ ಪಾಕಿಸ್ತಾನದ ಮೂಲಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ.

​ಮ್ಯಾಪ್‌ಗಳು ಪತ್ತೆ, ಅಜ್ಞಾತ ಸ್ಥಳದಲ್ಲಿ ವಿಚಾರಣೆ:

ದಾಳಿ ಸಂದರ್ಭದಲ್ಲಿ ಸಮೀರ್ ತಂಗಿದ್ದ ಕೊಠಡಿಯಲ್ಲಿ ಕೆಲವು ಸಂಶಯಾಸ್ಪದ ಮ್ಯಾಪ್‌ಗಳು (ಭೂಪಟಗಳು) ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಸದ್ಯ ಯುಪಿ ಎಟಿಎಸ್ ಅಧಿಕಾರಿಗಳು ಇಬ್ಬರೂ ಆರೋಪಿಗಳನ್ನು ಕಲಬುರಗಿಯ ಅಜ್ಞಾತ ಸ್ಥಳದಲ್ಲಿ ಇರಿಸಿಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

​ಪ್ರಕರಣ ದಾಖಲು:

ಘಟನೆಗೆ ಸಂಬಂಧಿಸಿದಂತೆ ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೇಶದ್ರೋಹಿ ಕೃತ್ಯ ಅಥವಾ ಭಯೋತ್ಪಾದನಾ ಜಾಲದೊಂದಿಗೆ ಹೊಂದಿದ್ದ ಲಿಂಕ್ ಕುರಿತು ತನಿಖೆ ತೀವ್ರಗೊಂಡಿದೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!